Numbers 1:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
Kannada BSI Bible 2016
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.
Kannada Bible (KNCL) BSI 2016
ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”