Numbers 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದ್ವಾನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
Kannada BSI Bible 2016
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು.
Kannada Bible (KNCL) BSI 2016
ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.