Numbers 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
Kannada BSI Bible 2016
ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.
Kannada Bible (KNCL) BSI 2016
“ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.