Numbers 10:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
Kannada BSI Bible 2016
ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ವಿುಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
Kannada Bible (KNCL) BSI 2016
ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು.