Numbers 10:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
Kannada BSI Bible 2016
ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
Kannada Bible (KNCL) BSI 2016
ಈ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು.