Numbers 10:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
Kannada BSI Bible 2016
ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.
Kannada Bible (KNCL) BSI 2016
ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.