Numbers 10:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
Kannada BSI Bible 2016
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.
Kannada Bible (KNCL) BSI 2016
ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.