Numbers 10:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
Kannada BSI Bible 2016
ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಮಂಜೂಷವು ಹೊರಡುವಾಗ ಮೋಶೆ - ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಹಗೆಗಾರರು ಬೆಂಗೊಟ್ಟು ಓಡಿಹೋಗಲಿ ಎಂದು ಹೇಳುವನು.
Kannada Bible (KNCL) BSI 2016
ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”