Numbers 10:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
Kannada BSI Bible 2016
ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ಬಿಡಿಸುವನು.
Kannada Bible (KNCL) BSI 2016
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.