Numbers 11:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
Kannada BSI Bible 2016
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
Kannada Bible (KNCL) BSI 2016
ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.