Numbers 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
Kannada BSI Bible 2016
ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೇಬಾಗಲುಗಳಲ್ಲಿ ನಿಂತು ಅಳುತ್ತಿರಲಾಗಿ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಮೋಶೆಗೆ ಬೇಸರವಾಯಿತು.
Kannada Bible (KNCL) BSI 2016
ಎಲ್ಲ ಕುಟುಂಬದವರು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತು ನಿಷ್ಠೂರವಾಗಿ ಮಾತನಾಡಿಕೊಳ್ಳುತ್ತಿದ್ದದ್ದು ಮೋಶೆಗೆ ಕೇಳಿಸಿತು. ಆಗ ಸರ್ವೇಶ್ವರನ ಕೋಪ ಉಕ್ಕೇರಿತು; ಮೋಶೆಗೆ ಇದನ್ನು ಸಹಿಸಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.