Numbers 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
Kannada BSI Bible 2016
ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? ನೀನು ನನಗೆ - ಕೂಸನ್ನು ಎತ್ತಿಕೊಂಡು ಹೋಗುವವನಂತೆ ಈ ಜನವನ್ನು ಉಡಿಲಲ್ಲಿಟ್ಟುಕೊಂಡು ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶಕ್ಕೆ ಒಯ್ಯಿ ಎಂದು ಹೇಳುತ್ತೀಯಲ್ಲಾ. ನಾನು ಇವರಿಗೆ ಹೆತ್ತ ತಾಯಿಯೋ?
Kannada Bible (KNCL) BSI 2016
ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?