Numbers 11:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
Kannada BSI Bible 2016
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನೀನು ತಿಳುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡ ಕರಿಸಿ ದೇವದರ್ಶನದ ಗುಡಾರದ ಬಾಗಲಿಗೆ ಕರತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೋ.
Kannada Bible (KNCL) BSI 2016
ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.