Numbers 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
Kannada BSI Bible 2016
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.
Kannada Bible (KNCL) BSI 2016
ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.