Numbers 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
Kannada BSI Bible 2016
ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
Kannada Bible (KNCL) BSI 2016
“ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.