Numbers 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
Kannada BSI Bible 2016
ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಹೊರಟು ಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು. ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದಾಗ
Kannada Bible (KNCL) BSI 2016
ಮೋಶೆ ಹೊರಟುಹೋಗಿ ಸರ್ವೇಶ್ವರನ ಮಾತುಗಳನ್ನು ಜನರಿಗೆ ತಿಳಿಸಿದನು. ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು.