Numbers 11:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಗುಡಾರದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
Kannada BSI Bible 2016
ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್‌, ಮತ್ತೊಬ್ಬನ ಹೆಸರು ಮೇದಾದ್‌; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಎಲ್ದಾದ್, ಮೇದಾದ್ ಎಂಬವರಿಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಹೋಗಲಿಲ್ಲ. ಆ ಆತ್ಮೀಯವರಗಳು ಅವರಿಗೂ ದೊರೆತದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
Kannada Bible (KNCL) BSI 2016
ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದು ಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.