Numbers 11:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
Kannada BSI Bible 2016
ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿಬಂದು - ಎಲ್ದಾದ್ ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆಂದು ತಿಳಿಸಲಾಗಿ
Kannada Bible (KNCL) BSI 2016
ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು.