Numbers 11:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
Kannada BSI Bible 2016
ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನದಿಂದ ಮೋಶೆಗೆ ಶಿಷ್ಯನಾದ ನೂನನ ಮಗ ಯೆಹೋಶುವನು ಮೋಶೆಗೆ - ಸ್ವಾಮೀ, ಅವರಿಗೆ ಬೇಡವೆನ್ನಬೇಕು ಎಂದು ಹೇಳಿದನು.
Kannada Bible (KNCL) BSI 2016
ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.