Numbers 11:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
Kannada BSI Bible 2016
ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಎದ್ದು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಳ್ಳುತ್ತಿದ್ದರು; ಸ್ವಲ್ಪವಾಗಿ ಕೂಡಿಸಿಕೊಂಡವರು ಹದಿನೆಂಟು ಖಂಡುಗ ಕೂಡಿಸಿದರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು.
Kannada Bible (KNCL) BSI 2016
ಇಸ್ರಯೇಲರು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಕಡಿಮೆ ಕೂಡಿಸಿಕೊಂಡವರು ಕೂಡ ಸಾವಿರ ಕಿಲೋಗ್ರಾಂನಷ್ಟು ಕೂಡಿಸಿಕೊಂಡರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.