Numbers 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
Kannada BSI Bible 2016
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು ಆ ಮಾಂಸವನ್ನು ಇನ್ನೂ ಆಹಾರಮಾಡಿಕೊಳ್ಳುತ್ತಿರುವಾಗ ಅದು ಮುಗಿದುಹೋಗುವದರೊಳಗಾಗಿಯೇ ಯೆಹೋವನು ಅವರ ಮೇಲೆ ಕೋಪಗೊಂಡು ಬಹಳ ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
Kannada Bible (KNCL) BSI 2016
ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು.