Numbers 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
Kannada BSI Bible 2016
ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು; ಈ ಮನ್ನವೇ ಹೊರತು ನಮಗೆ ಇನ್ನೇನೂ ಸಿಕ್ಕಲಿಕ್ಕಿಲ್ಲ ಅಂದುಕೊಳ್ಳುತ್ತಿದ್ದರು.
Kannada Bible (KNCL) BSI 2016
ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು? ಈ ‘ಮನ್ನ’ವನ್ನು ಬಿಟ್ಟರೆ ನಮಗೆ ಇನ್ನೇನು ಗತಿಯಿಲ್ಲ” ಎಂದು ನಿಷ್ಠುರವಾಗಿ ಮಾತನಾಡಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು.