Numbers 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
Kannada BSI Bible 2016
ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಇಲ್ಲವೆ ಒರಳಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು.
Kannada Bible (KNCL) BSI 2016
ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.