Numbers 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
Kannada BSI Bible 2016
ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಅದರ ನಿವಿುತ್ತ ವಿುರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತಾಡುವವರಾಗಿ -
Kannada Bible (KNCL) BSI 2016
ಮೋಶೆ ಕೂಷ್ ನಾಡಿನ ಮಹಿಳೆಯೊಬ್ಬಳನ್ನು ಮದುವೆ ಮಾಡಿಕೊಂಡಿದ್ದನು. ಈ ಕಾರಣ ಮಿರ್ಯಾಮಳು ಮತ್ತು ಆರೋನನು ಅವನಿಗೆ ವಿರುದ್ಧ ಮಾತಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು.