Numbers 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.
Kannada BSI Bible 2016
ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಹೀಗಿರಲಾಗಿ ಸರ್ವೇಶ್ವರ ತಟ್ಟನೆ ಮೋಶೆ, ಆರೋನ್ ಹಾಗೂ ಮಿರ್ಯಾಮರಿಗೆ, “ನೀವು ಮೂವರು ದೇವದರ್ಶನದ ಗುಡಾರಕ್ಕೆ ಬರಬೇಕು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.