Numbers 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.
Kannada BSI Bible 2016
ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೂವರು ಬಂದಾಗ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತು ಆರೋನ್ ವಿುರ್ಯಾಮರನ್ನು ಹತ್ತಿರಕ್ಕೆ ಕರೆದನು.
Kannada Bible (KNCL) BSI 2016
ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.