Numbers 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
Kannada BSI Bible 2016
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.
Kannada Bible (KNCL) BSI 2016
ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.