Numbers 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
Kannada BSI Bible 2016
ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.
Kannada Bible (KNCL) BSI 2016
ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”