Numbers 13:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.
Kannada BSI Bible 2016
ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು.
Kannada Bible (KNCL) BSI 2016
ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.