Numbers 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
Kannada BSI Bible 2016
ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲ್ಯರಿಗೆ ಅಶುಭಸಮಾಚಾರವನ್ನು ಹೇಳುವವರಾಗಿ - ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ; ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು;
Kannada Bible (KNCL) BSI 2016
ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.