Numbers 13:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಷಸರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಪ್ರಿಯತಮತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಪ್ರಿಯತಮತೆಗಳಂತೆ ಕಂಡುಬಂದೆವು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.
Kannada BSI Bible 2016
ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.
Kannada Bible (KNCL) BSI 2016
ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.