Numbers 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರಿ, ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
Kannada BSI Bible 2016
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.