Numbers 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
Kannada BSI Bible 2016
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ
Kannada Bible (KNCL) BSI 2016
ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,