Numbers 14:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
Kannada BSI Bible 2016
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
Kannada Bible (KNCL) BSI 2016
ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.