Numbers 14:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
Kannada BSI Bible 2016
ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು].
Kannada Bible (KNCL) BSI 2016
ನಿಮ್ಮ ಶವಗಳು ಈ ಮರುಭೂಮಿಯಲ್ಲೇ ಬೀಳುವುವು. ನೀವು ನನಗೆ ವಿರೋಧವಾಗಿ ಗೊಣಗಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.