Numbers 14:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
Kannada BSI Bible 2016
ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.
Kannada Bible (KNCL) BSI 2016
ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.