Numbers 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
Kannada BSI Bible 2016
ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು.
Kannada Bible (KNCL) BSI 2016
ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.