Numbers 14:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
Kannada BSI Bible 2016
ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಯೆಹೋವನೆಂಬ ನಾನೇ ಹೇಳಿದ ಮಾತು; ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಲೇ ಮಾಡುತ್ತೇನೆ; ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು ಎಂದು ಹೇಳಿದನು.
Kannada Bible (KNCL) BSI 2016
ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.