Numbers 14:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದರವರನ್ನು ಅವರಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಹತ್ತು ಜನರು ಯೆಹೋವನಿಂದ ವ್ಯಾಧಿಗೊಳಗಾಗಿ ಸತ್ತರು. (Verses 36-37)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
Kannada BSI Bible 2016
ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಅವನಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
Kannada Bible (KNCL) BSI 2016
ಆ ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆಯಿಂದ ಕಳಿಸಲಾಗಿದ್ದವರು ಹಿಂದಿರುಗಿ ಬಂದು ಆ ನಾಡಿನ ಬಗ್ಗೆ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧ ಗೊಣಗುವಂತೆ ಮಾಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವನ್ನು ಪರೀಕ್ಷಿಸುವುದಕ್ಕೆ ಮೋಶೆಯ ಅಪ್ಪಣೆಯ ಮೇರೆಗೆ ಹಿಂದಿರುಗಿ, ಆ ದೇಶದ ವಿಷಯವಾಗಿ ಕೆಟ್ಟ ಸುದ್ದಿಯನ್ನು ಎಬ್ಬಿಸಿ, ಸಮಸ್ತ ಸಭೆಯನ್ನು ಮೋಶೆಗೆ ವಿರೋಧವಾಗಿ ಗೊಣಗುಟ್ಟುವಂತೆ ಮಾಡಿದರು.