Numbers 14:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
Kannada BSI Bible 2016
ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
Kannada Bible (KNCL) BSI 2016
ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.