Numbers 14:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.