Numbers 14:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
Kannada BSI Bible 2016
ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇ ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವು ಮತ್ತು ಮೋಶೆಯು ಪಾಳೆಯವನ್ನು ಬಿಡಲಿಲ್ಲ.
Kannada Bible (KNCL) BSI 2016
ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.