Numbers 14:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.
Kannada BSI Bible 2016
ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.
Kannada Bible (KNCL) BSI 2016
ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.