Numbers 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
Kannada BSI Bible 2016
ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು
Kannada Bible (KNCL) BSI 2016
ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,