Numbers 15:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
Kannada BSI Bible 2016
ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.
Kannada Bible (KNCL) BSI 2016
ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.