Numbers 15:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
Kannada BSI Bible 2016
ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸರ್ವಸಮೂಹದವರಿಗೂ ಅವರಲ್ಲಿ ಇಳುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವದು. ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದರಲ್ಲಾ.
Kannada Bible (KNCL) BSI 2016
ಇಸ್ರಯೇಲರ ಸರ್ವಸಭೆಯವರಿಗೂ ಅವರ ಮಧ್ಯೆ ವಾಸಿಸುವ ವಿದೇಶೀಯರಿಗೂ ಅವರೆಲ್ಲರೂ ತಿಳಿಯದೆ ಮಾಡಿದ ತಪ್ಪಿಗೆ ಕ್ಷಮೆ ಲಭಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.