Numbers 15:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
Kannada BSI Bible 2016
ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ದನಗಳಲ್ಲಾಗಲಿ ಆಡುಕುರಿಗಳಲ್ಲಾಗಲಿ ಒಂದು ಪಶುವನ್ನು ಹೋಮಮಾಡುವವನು ಸರ್ವಾಂಗ ಹೋಮಮಾಡಿದರೂ ಸರಿಯೇ, ಹರಕೆ ಸಲ್ಲಿಸುವದಕ್ಕೋ ಕೃತಜ್ಞತೆಯನ್ನು ತೋರಿಸುವದಕ್ಕೋ ಹಬ್ಬವನ್ನು ಆಚರಿಸುವದಕ್ಕೋ ಸಮಾಧಾನಯಜ್ಞ ಮಾಡಿದರೂ ಸರಿಯೇ,
Kannada Bible (KNCL) BSI 2016
ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.