Numbers 15:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
Kannada BSI Bible 2016
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.