Numbers 15:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು - ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರು ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಗೆ ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.