Numbers 15:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
Kannada BSI Bible 2016
ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡುಕೊಂಡುಹೋಗಿ ಕಲ್ಲೆಸೆದು ಕೊಂದರು.
Kannada Bible (KNCL) BSI 2016
ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.